Bengaluru, Nov. 26: Constitution Day was celebrated herein Rashtrotthana Vidya Kendra – Banashankari.The program began with an explanation of the importance of Constitution Day. The students were informed that Constitution Day is celebrated every year on November 26 to commemorate the day of the adoption of the Constitution.The students gave inspiring speeches on the importance of the Constitution, its role in protecting civil rights and its importance in strengthening the values of democracy.Then the teacher read out the Constitution Pledge to everyone and guided them. They reaffirmed their new spirit of following the ideals of justice, freedom, equality and fraternity through the pledge.
ಬೆಂಗಳೂರು, ನ. 26: ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಬನಶಂಕರಿಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವು ಸಂವಿಧಾನ ದಿನದ ಪ್ರಾಮುಖ್ಯತೆಯನ್ನು ವಿವರಿಸುವುದರೊಂದಿಗೆ ಆರಂಭವಾಯಿತು. ಪ್ರತಿವರ್ಷ ನವೆಂಬರ್ 26ರಂದು ಸಂವಿಧಾನ ಅಂಗೀಕಾರದ ದಿನವನ್ನು ಸ್ಮರಿಸುವುದಕ್ಕಾಗಿ ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.ವಿದ್ಯಾರ್ಥಿಗಳು ಸಂವಿಧಾನದ ಮಹತ್ವ, ನಾಗರಿಕ ಹಕ್ಕುಗಳ ರಕ್ಷಣೆಯಲ್ಲಿ ಅದರ ಪಾತ್ರ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವಲ್ಲಿ ಅದರ ಮಹತ್ವ ಕುರಿತು ಸ್ಪೂರ್ತಿದಾಯಕ ಮಾತುಗಳನ್ನಾಡಿದರು.ನಂತರ ಶಿಕ್ಷಕರು ಸಂವಿಧಾನ ಪ್ರತಿಜ್ಞೆಯನ್ನು ಎಲ್ಲರಿಗೂ ಓದಿಕೊಟ್ಟು ಮಾರ್ಗದರ್ಶನ ನೀಡಿದರು. ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಬಾಂಧವ್ಯ ಇವುಗಳ ಆದರ್ಶಗಳನ್ನು ಪಾಲಿಸುವ ಪ್ರತಿಜ್ಞೆಯನ್ನು ಪುನರುಚ್ಚರಿಸಿದರು.


